ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು.
ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಿಸದೇ, ಅಭಿವೃದ್ಧಿಯಲ್ಲಿ ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡದೇ, ಬರಗಾಲದಿಂದ ನೊಂದು ತೀವ್ರ ಸಂಕಷ್ಟದಲ್ಲಿರುವ ರೈತರನ್ನು ನಿರ್ಲಕ್ಷಿಸಿ, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಗಳಿಗೂ ನಿರಾಸೆ ಮೂಡಿಸಿದ ಸರ್ಕಾರದ ಬಜೆಟ್ ಅನ್ನು ಖಂಡಿಸಲಾಯಿತು.
ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಎರಡೂ ಪಕ್ಷಗಳ ಉಭಯ ಸದನಗಳ ಸದಸ್ಯರು ಭಾಗವಹಿಸಿದ್ದರು.