ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನೆಗೊಂಡಿರುವ ಬಾಲರಾಮನ ಮೂರ್ತಿಯನ್ನು ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಡಾ. ಹಿರೇಮಠ ಫೌಂಡೇಶನ್ ಹಾಗೂ ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆ ಸಹಯೋಗದಲ್ಲಿ ‘ಅಭಿನವ ಅಮರ ಶಿಲ್ಪಿ’ ಬಿರುದು ಘೋಷಣೆಯಾಗಿದೆ. ಮಾರ್ಚ್ 4ರಂದು ಕಾರವಾರ ನಗರದ ಸಾಗರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯವ ಕಾರ್ಯಕ್ರಮದಲ್ಲಿ ಬಿರುದು ನೀಡಿ ಗೌರವಿಸಲಾಗುವುದು ಎಂದು ಡಾ. ಹಿರೇಮಠ ಫೌಂಡೇಶನ್ನ ಸಂಸ್ಥಾಪಕ ಡಾ. ವಿಶ್ವನಾಥ ಹಿರೇಮಠ ಅವರು ತಿಳಿಸಿದರು.