ಕಾಬೂಲ್ ಮಾ.2: ಕಳೆದ ಮೂರು ದಿನಗಳಿಂದ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ವ್ಯಾಪಕ ಹಿಮಪಾತವಾಗುತ್ತಿದ್ದು, 15 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ 30 ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ. ವರದಿಗಳ ಪ್ರಕಾರ ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಪ್ರಾಣಿಗಳು ಕೂಡ ಸಾವನ್ನಪ್ಪಿದೆ ಎಂದು ಹೇಳಿದೆ. ಸುಮಾರು ಹತ್ತು ಸಾವಿರ ಪ್ರಾಣಿಗಳು ಸಾವನ್ನಪ್ಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಸಾರ್-ಇ-ಪುಲ್ ನಿವಾಸಿ ಅಬ್ದುಲ್ ಖಾದಿರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಮೂರು ದಿನದಿಂದ ಹಿಮಪಾತ ಹೆಚ್ಚಾಗಿದೆ. ಜಾನುವಾರುಗಳು ಕೂಡ ಸಾವನ್ನಪ್ಪುತ್ತಿದೆ. ಇದರಿಂದ ಇಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ. ಅನೇಕ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಇದರಿಂದ ಯಾವುದೇ ಸಂಪರ್ಕವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.