ಬೆಂಗಳೂರು : ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ತನಿಖೆಯನ್ನು ರಾಜ್ಯ ಸರ್ಕಾರವು ಸಿಸಿಬಿ ಹೆಗಲಿಗೆ ಒಪ್ಪಿಸಿದ್ದು, ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ನೇಮಕಗೊಂಡಿದ್ದಾರೆ.