ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಸದ್ಯ ವಿದ್ಯಾರ್ಥಿನಿಯರು ದಾಖಲಾಗಿರುವ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿದ್ದಾರೆ. ಸಂತ್ರಸ್ಥ ವಿದ್ಯಾರ್ಥಿನಿಯರು ಮಂಗಳೂರು ನಗರದ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಡಾ.ನಾಗಲಕ್ಷ್ಮೀ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ಸಂತ್ರಸ್ಥ ವಿದ್ಯಾರ್ಥಿನಿಯರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.