ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾವು ಕಲಿತ ಶಾಲೆಗೆ ವೈಯಕ್ತಿಕವಾಗಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ದೇಣಿಗೆಯನ್ನು ನೀಡುವ ಮೂಲಕ ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದರು.
ಕಾರ್ಯಕ್ರಮ ಚಾಲನೆ ವೇಳೆ ಸಿಎಂ ಸಿದ್ದರಾಮಯ್ಯ ತಾನು ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 10 ಲಕ್ಷ ದೇಣಿಗೆ ನೀಡಿದರು. ಸಿದ್ದರಾಮಯ್ಯ ಅವರು ತಾವು ಪ್ರಾಥಮಿಕ ಶಿಕ್ಷಣ ಪಡೆದ ಕುಪ್ಪೇಗಾಲ ಹಾಗೂ ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಲಾ ₹ 10 ಲಕ್ಷ ವೈಯಕ್ತಿಕ ನೆರವು ನೀಡುವ ಮೂಲಕ ಯೋಜನೆ ಉದ್ಘಾಟನೆ ಮಾಡಿದರು. ಈ ವೇಳೆ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.