ಯಾದಗಿರಿ : ಉಗ್ರಾಣ ನಿಗಮ ಅಧ್ಯಕ್ಷ ನೇಮಕ ಮಾಡಿರುವ ನಕಲಿ ಆದೇಶ ಪತ್ರ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಈ ನಕಲಿ ನೇಮಕಾತಿ ಆದೇಶ ಪ್ರತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುವ ರೀತಿಯಲ್ಲೇ ಸಹಿ ಮಾಡಲಾಗಿದೆ. ಸಿದ್ದರಾಮಯ್ಯ ಅವರು ನೇಮಕ ಮಾಡಿ ಆದೇಶ ಹೊರಡಿಸಿರುವಂತೆ ನಕಲಿ ಆದೇಶ ಪ್ರತಿ ಸೃಷ್ಟಿಸಿದ್ದಾರೆ. ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎ.ಸಿ. ಕಾಡ್ಲೂರ್ ಅವರನ್ನು ಉಗ್ರಾಣ ನಿಗಮ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಹೊರಡಿಸಿರುವ ನಕಲಿ ಆದೇಶ ಪ್ರತಿ ವೈರಲ್ ಆಗಿದೆ. ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ನಿಧನದಿಂದ ತೆರವಾದ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೆ ಸರ್ಕಾರ ಹೊಸಬರನ್ನು ನೇಮಕ ಮಾಡಿಲ್ಲ. ಆದರೂ ಸಹ ಸಿದ್ದರಾಮಯ್ಯರ ಹೆಸರಲ್ಲಿ ಸೃಷ್ಟಿಸಿರುವ ನಕಲಿ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೆಗಷ್ಟೇ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ , ಅವರ ಅಕಾಲಿಕ ಮರಣದಿಂದಾಗಿ ಉಗ್ರಾಣ ನಿಗಮದ ಅಧ್ಯಕ್ಷ ಖಾಲಿಯಾಗಿತ್ತು ಇದೀಗ ಈ ಸ್ಥಾನಕ್ಕೆ ಎಸಿ ಕಾಡ್ಲೂರ್ ಎನ್ನುವರನ್ನು ನೇಮಕ ಮಾಡಿ ನಕಲಿ ಆದೇಶ ಪತ್ರವನ್ನು ಸೃಷ್ಟಿಸಲಾಗಿದೆ. ಮಾರ್ಚ್ 1 ರಂದು ಉಗ್ರಾಣ ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಹೊರಡಿಸಿರುವ ನಕಲು ಪ್ರತಿ ಫುಲ್ ವೈರಲ್ ಆಗಿದೆ.