ಮಂಗಳೂರು, ಮಾರ್ಚ್ 06: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಆ್ಯಸಿಡ್ ದಾಳಿ ಸಂತ್ರಸ್ತ ಮೂವರು ವಿದ್ಯಾರ್ಥಿನಿಯರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ತಕ್ಷಣವೇ ನೀಡಲಾಗುವುದು ಮತ್ತು ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದರು. ಕಡಬದಲ್ಲಿ ಸೋಮವಾರ ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ನಗರದ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಮಂಗಳವಾರ ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.