ನೆಲಮಂಗಲ, : ಭ್ರೂಣ ಹತ್ಯೆ ತಡೆಗೆ ನಿಷೇಧ ಹೇರಲಾಗಿದ್ದರೂ ಕೂಡ ನೆಲಮಂಗಲ ನಗರದ ಆಸರೆ ಆಸ್ಪತ್ರೆಯಲ್ಲಿಅವ್ಯಾಹತವಾಗಿ ಭ್ರೂಣ ಹತ್ಯೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು ವೈದ್ಯರು ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಭ್ರೂಣ ಲಿಂಗ ಪತ್ತೆ, ಭ್ರೂಣ ಹತ್ಯೆ ನಿಷೇಧವಿದ್ದರೂ ಯಾವ ಕಾನೂನನ್ನೂ ಪಾಲಿಸದೆ ಡಾಕ್ಟರ್ ರವಿಕುಮಾರ್ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. MTP ಕಾಯ್ದೆ ಪರವಾನಗಿ ಪಡೆಯದೇ ಬೇಕಾಬಿಟ್ಟಿಯಾಗಿ ಗರ್ಭಪಾತ ಮಾಡಿಸಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಆಸರೆ ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಟೌನ್ ಠಾಣೆಯಲ್ಲಿ ಡಾ.ರವಿಕುಮಾರ್ ವಿರುದ್ಧ ಮೊಕದ್ದಮೆ ಹೂಡಲಾಗಿದೆ. ಐಪಿಸಿ ಸೆಕ್ಷನ್ 312, 313, 315, 316ರಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.