ಮೈಸೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಕೊನೆಯುಸಿರೆಳೆದಿದ್ದಾರೆ. ವಾಸು ಅವರು ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. ಅಲ್ಲದೆ 2013ರಿಂದ 2018ರವರೆಗೆ ಶಾಸಕರಾಗಿ ಅಭಿವೃದ್ಧಿ ಕಾರ್ಯಗಳ ಮೂಲಕ ಗಮನ ಸೆಳೆದಿದ್ದರು. ಮೈಸೂರು ಮೇಯರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇನ್ನು ವಾಸು ಅವರ ನಿಧನಕ್ಕೆ ಗಣ್ಯರು ಸೇರಿದಂತೆ ಇತರರು ಕಂಬನಿ ಮಿಡಿದಿದ್ದಾರೆ.