ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ವಾಸು ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ವಾಸು ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ನನ್ನ ಆತ್ಮೀಯರಾಗಿದ್ದ ವಾಸು ಅವರ ಜತೆ ರಾಜಕೀಯ ಪಯಣದಲ್ಲಿ ಉತ್ತಮ ಒಡನಾಟ ಹೊಂದಿದ್ದೆ. ಮೈಸೂರು ಮೇಯರ್ ಆಗಿ, ನಂತರ ಶಾಸಕರಾಗಿ ವಾಸು ಅವರು ಮೈಸೂರು, ಚಾಮರಾಜನಗರ ಭಾಗದಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಪಕ್ಷಕ್ಕೆ ಬಹಳ ನಷ್ಟ ತಂದಿದೆ. ವಾಸು ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.