ಮೈಸೂರು: ಮೈಸೂರಿನ ಜೆ.ಎಸ್.ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡುವ ಮೂಲಕ ಮಾಜಿ ಶಾಸಕ ವಾಸು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 15 ವರ್ಷದ ಹಿಂದೆಯೇ ವಾಸು ಅವರು ದೇಹದಾನ ಮಾಡಿದ್ದಾರೆ ಇನ್ನು ಸಾರ್ವಜನಿಕರ ದರ್ಶನಕ್ಕೆ ಮೈಸೂರಿನ ಜಯಲಕ್ಷ್ಮಿಪುರಂ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ಬಳಿಕ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದೇಹ ಹಸ್ತಾಂತರ ಮಾಡಲಾಗುತ್ತದೆ.