ಭೋಪಾಲ್ : ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗವಾಗಿ ಹರಡಿದ್ದಲ್ಲದೆ, ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಬೆಂಕಿ ಅವಘಡದ ಕಾರಣ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ. ಒಳಗೆ ಐದು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ.