ಬೆಂಗಳೂರು : ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ. ಲಜ್ಜೆಗೇಡು!! ಅಂತ ಹ್ಯಾಶ್ಟ್ಯಾಗ್ ಕರ್ನಾಟಕದ_ಝೀರೋ, ಸಿದ್ದನಾಮಿಕ್ಸ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
ಸರಣಿ ಟ್ವೀಟ್ ಮಾಡಿದ ಅವರು “ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ! ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!! ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ! ಸುಳ್ಳಾಗದು” ಎಂದರು.