ಮೈಸೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಮೈಸೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವರಿಗೆ ಬಿಜೆಪಿಯಿಂದ ಸ್ವಾಗತ ಕೋರಲಾಯಿತು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ 4000 ಸಾವಿರ ಕೋಟಿ ವೆಚ್ಚದ 22 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಅಲ್ಲದೆ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಮುನಿಸ್ವಾಮಿ, ಎಚ್.ಡಿ. ರೇವಣ್ಣ, ಎಂಎಲ್ಸಿಗಳಾದ ಎಚ್. ವಿಶ್ವನಾಥ್, ಸಿ.ಎನ್. ಮಂಜೇಗೌಡ, ಶಾಸಕರಾದ ಶ್ರೀವತ್ಸ, ಜಿ.ಡಿ. ಹರೀಶ್ ಗೌಡ ಭಾಗಿಯಾಗಿದ್ದರು.