ಬೆಂಗಳೂರು : ಸಂವಿಧಾನ ತಿದ್ದುಪಡಿ ಕುರಿತು ಸಂಸದ ಅನಂತ್ಕುಮಾರ್ ಹೆಗಡೆ ಹೇಳಿಕೆಯಿಂದ ರಾಜ್ಯ ಬಿಜೆಪಿ ಘಟಕ ಅಂತರ ಕಾಯ್ದುಕೊಂಡಿದೆ. ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ತಿದ್ದುಪಡಿ ಹೇಳಿಕೆ ಅವರ ‘ವೈಯಕ್ತಿಕ ಅಭಿಪ್ರಾಯ’ ಮತ್ತು ಅವರಿಂದ ಈ ಬಗ್ಗೆ ವಿವರಣೆ ಪಡೆಯುವುದಾಗಿ ರಾಜ್ಯ ಬಿಜೆಪಿ ಹೇಳಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿ “ಸಂವಿಧಾನದ ಬಗ್ಗೆ ಸಂಸದ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು. ಮತ್ತು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ಮತ್ತು ಈ ಬಗ್ಗೆ ವಿವರಣೆಯನ್ನು ಅವರಿಂದ ಪಡೆದುಕೊಳ್ಳುತ್ತೇವೆ. ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಬಿಜೆಪಿ ಪುನರುಚ್ಚರಿಸುತ್ತದೆ” ಎಂದು ಪೋಸ್ಟ್ ಮಾಡಿದೆ.