ಮೈಸೂರು: ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಎಂಬ ವಿಚಾರ ಪ್ರತಾಪ್ ಸಿಂಹ ಪರ ಮೈಸೂರಿನ ಕೊಡವ ಸಮಾಜ ಬ್ಯಾಟಿಂಗ್ ಮಾಡಿದೆ. ಮೈಸೂರಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದರು. ಪ್ರತಾಪ್ ಸಿಂಹ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ. ಅಂತವರಿಗೆ ಟಿಕೆಟ್ ತಪ್ಪಿಸುವುದು ಸರಿಯಲ್ಲ. ಪಕ್ಷದ ವರಿಷ್ಠರು ಈ ಬಾರಿಯೂ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡಬೇಕು ಎಂದು ಮೈಸೂರು ವಿಭಾಗದ ಕೊಡವ ಸಮಾಜ ಒತ್ತಾಯ ಮಾಡಿದರು.