ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕಾಲುವೆ ದುರಂತ ನಡೆದಿದೆ. ವಿ.ಸಿ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದೆ. ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ನೀರಿಲ್ಲದ ಕಾಲುವೆಗೆ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕಾರು ಉರುಳಿ ಬಿದ್ದಿದೆ. ಇನ್ನು ಮೃತರ ವಿಳಾಸ ಯಾವುದು ತಿಳಿದು ಬಂದಿಲ್ಲ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಣ್ಣತಮ್ಮಂದಿರು ಎಂದು ಶಂಕಿಸಲಾಗಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.