ನವದೆಹಲಿ : ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿಯಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕರ್ನಾಟಕ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧವಾಗಿ ದೆಹಲಿಯಲ್ಲಿ ಮಾತನಾಡಿದ ಆರ್ ಅಶೋಕ್ , ಸಂವಿಧಾನ ಬದಲಿಸುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ನಾವು ಸಂವಿಧಾನವನ್ನು ಗೌರವಿಸುತ್ತೇವೆ. ಅನಂತಕುಮಾರ್ ಹೆಗಡೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ. ಅವರ ವಿರುದ್ಧ ಪಕ್ಷ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.