ಬೆಂಗಳೂರು : ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳೂ ಇವೆ ಎಂಬ ವದಂತಿಯೂ ಇದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸದಾನಂದ ಗೌಡ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರವಾಗಿ ಬಹಳಷ್ಟು ಜನ ನಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆ ಜಯಪ್ರಕಾಶ್ ಹೆಗ್ಡೆ, ಎಂಪಿಕೆ ನಮ್ಮ ಪಕ್ಷ ಸೇರಿದ್ದಾರೆ. ಇನ್ನೂ ಬಹಳ ಜನ ಪಕ್ಷಕ್ಕೆ ಬರುವವರಿದ್ದಾರೆ. ಅದರಲ್ಲಿ ಹಾಲಿ ಬಿಜೆಪಿ ಎಂಪಿಗಳು ಕೂಡ ಇದ್ದಾರೆ. ಈಗ ಅವರ ಹೆಸರು ಬಹಿರಂಗ ಪಡಿಸುವುದಿಲ್ಲ ಎಂದು ಹೇಳಿದರು. ಸದಾನಂದ ಗೌಡರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.