ಬೆಂಗಳೂರು : ರಾಜ್ಯ ಸರ್ಕಾರವು ಹಿಂಪಡೆದಿರುವ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಆದೇಶವು ರ್ಯಾಪಿಡೊ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ ಎಂದು ರ್ಯಾಪಿಡೊ ಕಂಪನಿ ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶದ ಪ್ರಕಾರ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೊಗೆ ಸರ್ಕಾರದ ಆದೇಶ ಅನ್ವಯವಾಗುವುದಿಲ್ಲ. ರಾಜ್ಯ ಸರ್ಕಾರದ ಆದೇಶವು ವಿದ್ಯುತ್ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು, ರ್ಯಾಪಿಡೊ ಸೇವೆ ಯಥಾಪ್ರಕಾರ ಮುಂದುವರೆಯಲಿದೆ ಎಂದು ಹೇಳಿದೆ.
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಪಡಿಸಿತ್ತು.