ದಾವಣಗೆರೆ :ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನ ನಿನ್ನೆ ಬಿಡುಗಡೆ ಮಾಡಿದೆ. ಕೆಲವು ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಅದರಂತೆ ದಾವಣಗೆರೆ ಹಾಲಿ ಸಂಸದ ಸಿದ್ದೇಶ್ವರ್ ಪತ್ನಿ ಗಾಯತ್ರಿ ಅವರನ್ನ ಈ ಬಾರಿ ಲೋಕಾ ಸಮರಕ್ಕೆ ಬಿಜೆಪಿ ಇಳಿಸಿದೆ. ಆದರೆ, ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಕೂಡ ಲೋಕಾ ಟಿಕೆಟ್ ಆಕಾಂಕ್ಷಿ ಆಗಿದ್ದರು. ಇದೀಗ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ಬೆಂಬಲಿಗನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ.ರವೀಂದ್ರನಾಥ್ ನಿವಾಸದ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.