ಮೈಸೂರು: ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯ ಡಾ. ಮೋಹನ್ ಸಿದ್ದರಾಮಯ್ಯರ ನಿವಾಸಕ್ಕೆ ಇಂದು ಭೇಟಿ ನೀಡಿದ್ದಾರೆ. ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ಅನಿಲ್ ಚಿಕ್ಕಮಾದು ಹಾಗೂ ಬಿಜೆಪಿಯ ಮಾಜಿ ಸಚಿವ ಕೋಟೆ ಶಿವಣ್ಣ ಜೊತೆಯಲ್ಲಿ ಭೇಟಿ ನೀಡಿದ ಡಾ.ಮೋಹನ್ ಕೆಲಕಾಲ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ. ಇನ್ನು ಮಾತುಕತೆ ನಂತರ ಯಾವುದೇ ಪ್ರತಿಕ್ರಿಯೆ ನೀಡದೆ ಡಾ ಮೋಹನ್ ತೆರಳಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.