ಮೈಸೂರು: ನಗರದ ಸುಬ್ಬಯ್ಯ ರಸ್ತೆಯಲ್ಲಿರುವ ಮಾಜಿ ಸಚಿವ ಸಾ.ರಾ.ಮಹೇಶ್ ಕಚೇರಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ. ಈ ಸಂದರ್ಭ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸಾರಾ ಮಹೇಶ್ ಮೈಸೂರು ಭಾಗದಲ್ಲಿ ಹಿಡಿತ ಹೊಂದಿರುವ ಜೆಡಿಎಸ್ ಹಿರಿಯ ಶಾಸಕ. ಹೀಗಾಗಿ ಯದುವೀರ್ ಸಾ.ರಾ. ಮಹೇಶ್ ಬೆಂಬಲವನ್ನು ಕೋರಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ, ಸೇರಿದಂತೆ ಬಿಜೆಪಿ ಜೆಡಿಎಸ್ ನಾಯಕರು ಭಾಗಿಯಾಗಿದ್ದರು.