ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಹಣ, ಹೆಂಡ ಮತ್ತು ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು ಸೆಳೆಯುವುದಕ್ಕೆ ಬ್ರೇಕ್ ಬೀಳುತ್ತದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.