ಬೆಂಗಳೂರು : ಮಾ.20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್ 19ರಂದು ಸಭೆ ಇದ್ದು ಅಂದೇ ತೀರ್ಮಾನಿಸುತ್ತೇವೆ. ಆದರೆ, ನಾವು ಮಾ.20ರಂದು ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.