ಮೈಸೂರು: ಕಾಂಗ್ರೆಸ್ ಆಫರ್ ವಿಚಾರಕ್ಕೆ ಸಂಬಂಧಪಟ್ಟಂತೆ ಗುಟ್ಟು ಬಿಟ್ಟುಕೊಡದೆ ಅಸಂಬದ್ಧ ಉತ್ತರ ನೀಡಿ ಸಂಸದ ಪ್ರತಾಪ್ ಸಿಂಹ ಜಾರಿಕೊಂಡರು. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, 2014 ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತ ಹೈಕಮಂಡ್ ಹೇಳಿರಲಿಲ್ಲ. ನಾನು ಯಾಕೆ ಕೊಟ್ಟರಿ ಅಂತ ಕೇಳಿರಲಿಲ್ಲ. ಈಗಲೂ ಅಷ್ಟೆ ಯಾಕೆ ತಪ್ಪಿಸಿದ್ದೀರಿ ಅಂತ ನಾನು ಕೇಳಿಯೂ ಇಲ್ಲ. ಅವರು ಹೇಳಿಯೂ ಇಲ್ಲ. ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತು ಇಲ್ವಾ ಎಂಬ ಯಾವ ಪ್ರಶ್ನೆಗಳು ಈಗ ಪ್ರಸ್ತುತ ಅಲ್ಲ. ನಮಗೆ ಯದುವೀರ್ ಅವರನ್ನು ಗೆಲ್ಲಿಸುವುದಷ್ಟೇ ಈಗ ಮುಖ್ಯ. ದೇಶಕ್ಕೆ ಮೋದಿ ಬೇಕು, ಮೋದಿ ಪರವಾಗಿ ಕೈ ಎತ್ತಲು ಮೈಸೂರಿನಿಂದ ಒಬ್ಬ ವ್ಯಕ್ತಿ ಬೇಕು ಇದಷ್ಟೇ ನಮಗೆ ಮುಖ್ಯ. ಪಕ್ಷ ನನಗೆ ತಾಯಿ ಇದ್ದಾಗೆ. ಇದು ಬರಿ ಬಾಯಿ ಮಾತಲ್ಲ.ಇದು ನನ್ನ ಮನಸಿನ ಮಾತು ಎಂದು ಹೇಳಿದರು.