ಮೈಸೂರು: ನನ್ನ ತಾಯಿ ನನ್ನ ಪರವಾಗಿ ಪ್ರಚಾರಕ್ಕೆ ಬರುವ ಅಗತ್ಯ ಈಗ ಇಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾಯಿ ಆಶೀರ್ವಾದದಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಅವರು ನನ್ನ ಪರವಾಗಿ ಹೇಳಿಕೆ ಕೊಡಬೇಕೆಂಬುದು ಏನು ಇಲ್ಲ.ಅವರ ಸಹಕಾರ ನನ್ನ ಮೇಲೆ ಸದಾ ಇರುತ್ತದೆ ಎಂದು ಹೇಳಿದರು.