ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಬಗ್ಗೆ ಬಲವಾದ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ, ಸದಾನಂದ ಗೌಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ. ಸದಾನಂದ ಗೌಡರ ಪಕ್ಷ ಸೇರ್ಪಡೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಭಿನ್ನ ಅಭಿಪ್ರಾಯಗಳಿವೆ ಎಂದು ಮೂಲಗಳು ತಿಳಿಸುವೆ. ಮತ್ತೊಂದೆಡೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಸದಾನಂದ ಗೌಡಗೆ ನೀಡುವ ಬಗ್ಗೆ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ಆದರೆ, ಮೈಸೂರು ಕ್ಷೇತ್ರದ ಟಿಕೆಟ್ ನೀಡುವುದನ್ನು ಸಿದ್ದರಾಮಯ್ಯ ಸಾರಾಸಗಟಾಗಿ ತಳಿಹಾಕಿದ್ದಾರೆ.