ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 28 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಅಧಿಕ ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ.
ಮಂಡ್ಯ ನಗರದ ಹಾಲಹಳ್ಳಿ ಲೇಬರ್ ಕಾಲೋನಿಯ ಮುಸ್ಲಿಂ ಬ್ಲ್ಯಾಕ್ ಹತ್ತನೇ ಕ್ರಾಸ್ ನ ಗೌನ್ ಪಾಷಾರ ಮಗ ಸಲ್ಮಾನ್ ಪಾಷಾ ಜಿ ಶಿಕ್ಷೆಗೆ ಗುರಿಯಾದವ.
2022 ನೇ ಜುಲೈ 3 ರಂದು ರಾತ್ರಿ ಊಟ ಮುಗಿಸಿ ತಮ್ಮ ಮನೆಯ ರೂಂನಲ್ಲಿ ಮಲಗಿದ್ದ ಅಪ್ರಾಪ್ತೆಯನ್ನು ಪುಸಲಾಯಿತಿ ಲೈಂಗಿಕ ದೌಜರ್ನ್ಯ ವೆಸಗಿದ್ದ.
ಪ್ರಕರಣ ಕುರಿತಂತೆ ದೂರು ದಾಖಲಾಗಿತ್ತು. ಮಂಡ್ಯದ ಅಧಿಕ ಸತ್ಯ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ನಾಗಜ್ಯೋತಿ.ಕೆ.ಎ. ಅವರ ಮುಂದೆ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಸಲ್ಮಾನ್ ಪಾಷನಿಗೆ ವಿವಿಧ ಪ್ರಕರಣಗಳ ಅಡಿಯಲ್ಲಿ 28 ವರ್ಷ ಶಿಕ್ಷೆ ವಿಧಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಸಂತ್ರಸ್ತ ಯುವತಿಯ ಪರ ವಾದ ಮಂಡಿಸಿದರು