ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡದಿಂದ ಸುಮಾರು 2 ಗಂಟೆಗಳ ಕಾಲ ನಡೆದ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೆಚ್ಡಿಕೆ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿಗೆ 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು.
H.D.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ಆಗಮಿಸಿದ್ದಾರೆ. ಇನ್ನು ಮತ್ತೊಂದೆಡೆ ರಾಮನಗರ, ಮಂಡ್ಯ, ಹಾಸನ, ಮೃಸೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಡಿ ಕುಮಾರಸ್ವಾಮಿ ಅಭಿಮಾನಿಗಳು, ಬೆಂಬಲಿಗರು ಪ್ರಾರ್ಥನೆ ಸಲ್ಲಿಸಿದರು.