ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಈ ಕುರಿತು ಪುತ್ರ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ತಂದೆಯ ಆರೋಗ್ಯದ ಕುರಿತು ಹಂಚಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದಿದ್ದಾರೆ.
ಇನ್ನು ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.