ಮಂಡ್ಯ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮಂಡ್ಯ ಟೌನ್ ಹಳೆನಗರ ಮೌಲಾನಾ ಆಜಾದ್ ಮಾದರಿ ಶಾಲೆ ಮತ್ತು ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳು ಮತ್ತು ಪ.ಜಾತಿ/ಪ.ಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 14 ಕೊನೆಯ ದಿನಾಂಕವಾಗಿದ್ದು, https://dom.karnataka.gov.in ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ 8277799990, 080-22535902 ಜಿಲ್ಲಾ ಕಛೇರಿ ದೂ.08232-297240 ಹಾಗೂ ಮಂಡ್ಯ ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ನಿಮ್ಮ ಹತ್ತಿರದ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.