ಪ್ರತಿನಿಧಿ ವರದಿ ಮಂಡ್ಯ
ಬರಗಾಲ ನಿರ್ವಹಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಆರೋಪಿಸಿದ್ದಾರೆ.
ಬಿಜೆಪಿ ವತಿಯಿಂದ ನಗರದ ವಿವಿಧ ಬಡಾವಣೆಗಳಲ್ಲಿ ಭಾರತದ ಸಮಸ್ತ ದೇಶವಾಸಿಗಳಿಗೆ ಪ್ರಧಾನಿ ಮೋದಿಯವರ ಪತ್ರ ತಲುಪಿಸುವ ಕರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬರದ ಸಮಸ್ಯೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಇದೆ. ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂದು ದೂರಿದರು.
ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮ್ಮನ್ನು ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ನೀರಿನ ಸಮಸ್ಯೆಯತ್ತ ಗಮನ ಕೊಡುತ್ತಿಲ್ಲ. ಕುಡಿಯುವ ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.
ಬರಗಾಲ ಪೀಡಿತ ಎಂದು ಘೋಷಿಸುವ ಮೊದಲು ಅಳೆದು ತೂಗಿ 3 ತಿಂಗಳು ಮುಂದೆ ಹಾಕಿದ್ದರು. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲದ ಕಾರಣ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ್ದಾರೆ ಎಂದು ಟೀಕಿಸಿದರು.
ಸರ್ಕಾರವೇ 223 ತಾಲೂಕುಗಳನ್ನು ಬರಪೀಡಿತ ಎಂದು ಪ್ರಕಟಿಸಿದೆ. ಎಷ್ಟು ಜನ ಸಚಿವರು ಜಿಲ್ಲೆಗೆ ಹೋಗಿ ಬರಗಾಲ ಎದುರಿಸಲು, ಬರದ ಬವಣೆ ನೀಗಿಸಲು ಯೋಜನೆ ರೂಪಿಸಲು ಮುಂದಾಗಿದ್ದಾರೆ, ಎಷ್ಟು ಸಚಿವರು ಬರಪೀಡಿತ ತಾಲೂಕುಗಳಿಗೆ ಪ್ರವಾಸ ಮಾಡಿದ್ದಾರೆ. ಕುಡಿಯುವ ನೀರಿಗೆ ಆಹಾಕಾರ ಇದೆ. ಜನಸಾಮಾನ್ಯರ ಹಾಹಾಕಾರ ನೀಗಿಸುವ ಅಧಿಕಾರ ಇರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅವರ ಅಸಮರ್ಥತೆ, ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ ಎಂದು ದೂರಿದರು.
ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಶುರುವಾಗಿದೆ. ಅಂತಾರಾಷ್ರ್ೀ ಮಟ್ಟದಲ್ಲಿ ಬೆಂಗಳೂರಿಗೆ ಐಟಿ, ಬಿಟಿ ಸಿಟಿ ಎಂಬ ಹೆಸರಿದೆ. ವ್ಯವಹಾರದ ವಿಷಯದಲ್ಲಿ ಬೆಂಗಳೂರಿಗೆ ಆಧ್ಯತೆ ಕೊಡಲಾಗುತ್ತಿತ್ತು. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಬಿಜೆಪಿ ಆಗ್ರಸಿತ್ತು. ಆದರೂ ಇಂಡಿ ಒಕ್ಕೂಟದ ಭಾಗಿದಾರ ಪಕ್ಷವೆಂಬ ಕಾರಣಕ್ಕೆ ಸ್ಟಾಲಿನ್ ಅವರ ಕೋರಿಕೆ ಮೇರೆಗೆ ನೀರನ್ನು ಬಿಟ್ಟಿದ್ದಾರೆ. ಈಗ ಶೇ. 60 ಬೋರ್ವೆಲ್ಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೂ ಆಹಾಕಾರ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ದುಷ್ಟ ರೈತ ವಿರೋಧಿ, ಬಡವರ ವಿರೋಧಿ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ್, ಮುಖಂಡರಾದ ನಿತ್ಯಾನಂದ, ವೈರಮುಡಿ, ಎಲ್ಲೇಗೌಡ, ರಜತ್, ನವೀನ್, ಶಿವಲಿಂಗಯ್ಯ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.