ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಒಕ್ಕಲಿಗರಿಗೆ ಮಣೆ ಹಾಕಲ್ಲ ಅಂತಾ ಆರೋಪ ಇದೆ. ಆದ್ರೆ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಒಕ್ಕಲಿಗ ಸಮಾಜಕ್ಕೆ ಅವಕಾಶ ಕೊಟ್ಟಿದೆ. ಬಿಜೆಪಿಯಲ್ಲಿ ಒಕ್ಕಲಿಗ ಸಮಾಜಕ್ಕೆ ಪ್ರಾಧಾನ್ಯತೆ ಸಿಗುತ್ತಿಲ್ಲ ಎಂದು ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 47 ವರ್ಷಗಳ ನಂತ್ರ ಕಾಂಗ್ರೆಸ್ ಪಕ್ಷ ಮೈಸೂರಿನಲ್ಲಿ ಒಕ್ಕಲಿಗ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಮಾಜಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಿದೆ. ನಮ್ಮ ಒಕ್ಕಲಿಗ ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರು, ಕೆ.ವೆಂಕಟೇಶ್ ಅವ್ರನ್ನ ಮಂತ್ರಿ ಮಾಡಿ ಚಾಮರಾಜನಗರ ಉಸ್ತುವಾರಿ ಮಾಡಿದ್ದಾರೆ. ಮಂಡ್ಯದಲ್ಲಿ ಚೆಲುವರಾಯಸ್ವಾಮಿಗೆ ಮಂತ್ರಿ ಮಾಡಿ ಮಂಡ್ಯ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ. ಬೇರೆ ಪಕ್ಷದಲ್ಲಿ ಒಕ್ಕಲಿಗ ಸಮಾಜಕ್ಕೆ ಪ್ರಾಧಾನ್ಯತೆ ನೀಡಿಲ್ಲ ಅನ್ನೋದನ್ನ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.