ಮೈಸೂರು : ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಹಳೆ-ಮೈಸೂರು ಭಾಗದಲ್ಲಿ ಪಕ್ಷವನ್ನು ಗಟ್ಟಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಬಿಜೆಪಿಯ ಪ್ರಭಲನಾಯಕನಿಗೆ ಗಾಳ ಹಾಕಿದೆ. ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಮಾರ್ಚ್ 27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಹೆಚ್.ವಿ ರಾಜೀವ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶಾಸಕ ಎಸ್ಟಿ ಸೋಮಶೇಖರ್ ಆಪ್ತರಾಗಿದ್ದಾರೆ. ಹೆಚ್.ವಿ ರಾಜೀವ್ ಕೆ.ಆರ್ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಹೊಂದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಅವರು ಕೆಲವು ದಿನಗಳಿಂದ ತಮ್ಮ ಮೂಲ ಪಕ್ಷ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ಅಂಗಳದಲ್ಲಿ ನಿಂತಿದ್ದಾರೆ. ಅಲ್ಲದೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.