ಮೈಸೂರು : ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟೂ ಆಗಿಲ್ಲ. ಎಳೆದಾಟವೂ ಆಗಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಈ ಸಂಬಂಧ ಮಾತನಾಡಿದ ಅವರು, ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ.ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ.ಅವರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಅದು ಸಾಧ್ಯನಾ…? ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲವಾಗುತ್ತದೆ. ಈ ಹಿಂದೆ ಜೆಡಿಎಸ್ ಜತೆ ಮೈತ್ರಿ ಆಗಿದ್ದಾಗ ಅನಾನುಕೂಲ ಆಗಿದೆ. ಅದರಂತೆ ಇವರ ಮೈತ್ರಿಯೂ ಅನುಕೂಲ ಆಗಲ್ಲ.ಅವರ ಮೈತ್ರಿ ನಮಗೆ ಅನುಕೂಲ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ ಎಂದರು. ಇದೇ ವೇಳೆ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣ ವಿಚಾರಕ್ಕೆ ಮಾತನಾಡಿದ ಅವರು, ಜನರು ಬಯಸಿದವರಿಗೆ ಟಿಕೆಟ್ ಕೊಟ್ಟಿದ್ದೇವೆ.ಇದರಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂದು ಹೇಳಿದರು.