ಉಡುಪಿ : ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಎರಡು ವಿಚಾರವಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ದೂರು ನೀಡಿದೆ.
ಶಾಸಕರನ್ನ ಸೆಳೆಯೋದಕ್ಕೆ ಬಿಜೆಪಿ 50 ಕೋಟಿ ಆಫರ್ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಇಂಗ್ಲಿಷ್ ಬರಲ್ಲ ಅನ್ನೋ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ಮೀನಾ ಅವರಿಗೆ ದೂರು ನೀಡಲಾಗಿದೆ.