ಬೆಂಗಳೂರು : ಕೆಆರ್ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುಉದು ಖಚಿತವಾಗಿದೆ. ಅಲ್ಲದೇ ಬಿಜೆಪಿ ಜೊತೆ ಕೆಆರ್ಪಿಪಿ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಗಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕೆಆರ್ಪಿಪಿ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನವಾಗಿದೆ. ಇನ್ಜು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ನಾಯಕರ ಆಹ್ವಾನದ ಮೇರೆಗೆ ನಾಳೆ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಧಿಕೃತವಾಗಿ ಘೋಷಿಸಿದರು.
ಬೆಂಗಳೂರಿನನಲ್ಲಿರುವ ತಮ್ಮ ಪಾರಿಜಾತ ನಿವಾಸದಲ್ಲಿ ಪದಾಧಿಕಾರಿಗಳು, ಬೆಂಬಲಗರ ಸಭೆ ನಡೆಸಿದ ಜನಾರ್ದನ ರೆಡ್ಡಿ, ಬಿಜೆಪಿ ನಾಯಕರು ನೀಡಿದ ಆಹ್ವಾನದ ಬಗ್ಗೆ ಮುಕ್ತವಾಗಿ ಚರ್ಚಿಸಿದರು. ಅಲ್ಲದೇ ಸಭೆಯಲ್ಲಿ ಬಿಜೆಪಿ ಜತೆ ಕೆಆರ್ಪಿಪಿ ಪಕ್ಷದ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಯ್ತು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲಾ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.