ನಾಪೋಕ್ಲು: ಚೋನಾಕೆರೆ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರದಿಂದ -ವಿದ್ಯುತ್ ಕಂಬಗಳಿಗೆ ಹಾನಿಯಾಯಿತು. ಒಂದಷ್ಟು ಸಮಯ ಸಂಚಾರಕ್ಕೆ ಅಡಚಣೆಯಾಯಿತು. ನಂತರ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ನಾಪೋಕ್ಲು – ಭಾಗಮಂಡಲ ಮುಖ್ಯರಸ್ತೆಯಲ್ಲಿ ಭಾನುವಾರ ಮುಂಜಾನೆ ನಡೆದಿದ್ದು, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಅಭಾವ ಉಂಟಾಯಿತು. ಪರಿಣಾಮ ನೆಲಜಿ, ಬಲ್ಲಮಾವಟಿ, ಭಾಗಮಂಡಲಕ್ಕೆ ತೆರಳುವ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು. ಕೂರುಳಿ, ಎಮ್ಮೆಮಾಡು ಮಾರ್ಗದ ಮೂಲಕ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಾಯಿತು.
ಗ್ರಾಮಸ್ಥರು ಹಾಗೂ ಸಾರ್ವಜನಿಕರು ಯಂತ್ರ ಬಳಸಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆಕಲ್ಪಿಸುವಲ್ಲಿ ಯಶಸ್ವಿಯಾದರು.
5 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದ ಚೋನಾಕೆರೆ,ಕೂರುಳಿ,ನೆಲಜಿ, ಎಮ್ಮೆಮಾಡು, ಬಲ್ಲಮಾವಟಿ, ಪೇರೂರು ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಹಾನಿಯಾದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ವಿದ್ಯುತ್ ಕಂಬಗಳನ್ನು ಮರುಸ್ಥಾಪಿಸಿ ವಿದ್ಯುತ್ ಅಭಾವ ಉಂಟಾಗದಂತೆ ನಾಪೋಕ್ಲು ಸೆಸ್ಕ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.
ಫೋಟೋ 24 ಎಂಡಿಕೆ 11 ; ಚೋನಾಕೆರೆ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರದಿಂದ ಸಂಚಾರಕ್ಕೆ ತೊಡಕುಂಟಾಯಿತು.