ಮೇಲುಕೋಟೆ: ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಲಕ್ಷಾಂತರ ಭಕ್ತರ ಸಮಕ್ಷಮದಲ್ಲಿ ಚೆಲುವನಾರಾಯಣಸ್ವಾಮಿಯವರ ಮಹಾರಥೋತ್ಸವ ಭಾನುವಾರ ವೈಭವದಿಂದ ನೆರವೇರಿತು.
ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು ತೇರೊಪ್ಪತ್ತಿನ ಉಪವಾಸ ಮಾಡಿ ರಥದರ್ಶನ ಮಾಡಿ ಹರಕೆ ಪೂರೈಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಪುತ್ರ ಸಚಿನ್ , ದರ್ಶನ್ ಪುಟ್ಟಣ್ಣಯ್ಯ ಸಹೋದರ ರಾಘು ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಸಂತೋಷ್ ಸೇರಿದಂತೆ ಹಲವು ಗಣ್ಯರು ರಥೋತ್ಸವದಲ್ಲಿ ಭಾಗಿಯಾಗಿದ್ದರು.
ಮಹಾರಥೋತ್ಸವದ ಪ್ರಯುಕ್ತ ದೇವಾಲಯದ ಪೂಜಾಕೈಂಕರ್ಯವನ್ನು ಬೆಳಗಿನ 6 ಗಂಟೆಗೆ ಆರಂಭಿಸಲಾಯಿತು. ರಥಬಲಿ ಬಲಿಪ್ರದಾನದ ನಂತರ ಅಮ್ಮನವರ ಸನ್ನಿಧಿಯ ಬಳಿ ಬೆಳಿಗ್ಗೆ 8 ಗಂಟೆಯವೇಳೆಗೆ ಯಾತ್ರಾದಾನ ನೆರವೇರಿಸಲಾಯಿತು. ನಂತರ 9-15 ರ ವೇಳೆಗೆ ವೇದಪಾರಾಯಣ ಹಾಗೂ ಮಂಗಳವಾದ್ಯದೊಂದಿಗೆ ಶ್ರೀದೇವಿ ಭೂದೇವಿ ಕಲ್ಯಾಣನಾಯಕಿಯರೊಂದಿಗೆ ವಜ್ರಖಚಿತ ರಾಜಮುಡಿ ಧರಿಸಿದ ಚೆಲುವನಾರಾಯಣಸ್ವಾಮಿಯ ಉತ್ಸವ ಒಳಪ್ರಾಕಾರ ಮತ್ತು ಹೊರಪ್ರಾಕಾದರಲ್ಲಿ ನಡೆದ ನಂತರ ರಥಮಂಟಪ ತಲುಪಿತು. ರಥಮಂಟಪಕ್ಕೆ ಮೂರು ಪ್ರದಕ್ಷಿಣೆ ಪೂರೈಸಿದ ನಂತರ ಜೋಯಿಸರ ಮಹೂರ್ತಪಠಣದ ತರುವಾಯ ರಥಾರೋಹಣ ನೆರವೇರಿಸಲಾಯಿತು.
ಮಹಾರಥದಲ್ಲಿ ಲೋಕಕಲ್ಯಾಣಾರ್ಥವಾಗಿ ಮಳೆ-ಬೆಳೆ ಉತ್ತಮವಾಗಿ ಆಗಿ ನಾಡಿನಲ್ಲಿ ಸಮೃದ್ಧಿನೆಲೆಸಲಿ ಎಂದು ಪ್ರಾಥರ್ಿಸಿ ವಿಶೇಷಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. 11-30ರವೇಳೆಗೆ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಚತುವರ್ೀದಿಗಳಲ್ಲಿ ಸಡಗರ ಸಂಭ್ರಮದಿಂದ ಸಂಚರಿಸಿ 3 ಗಂಟೆಗೆ ಮುಕ್ತಾಯವಾಯಿತು .
ಹರಿದು ಬಂದ ಭಕ್ತಸಾಗರ
——————
ಈ ವರ್ಷ ನಡೆದ ಮಹಾರಥೋತ್ಸವಕ್ಕೆ ನಿರೀಕ್ಷೆಗೂ ಮೀರಿ ಭಕ್ತಸಾಗರವೇ ಹರಿದು ಬಂದಿತ್ತು ಉತ್ಸವ ಬೀದಿಗಳು, ಕಲ್ಯಾಣಿ ದೇವಾಲಯಗಳು ಹಾಗೂ ನರಸಿಂಹಸ್ವಾಮಿ ಬೆಟ್ಟದಲ್ಲಿ ಭಕ್ತರು ಕಿಕ್ಕಿರಿದು ತುಂಬಿದ್ದರು. ವೈರಮುಡಿ ಉತ್ಸವದಷ್ಠೇ ಭಕ್ತರು ಆಗಮಿಸಿ ರಥದರ್ಶನಮಾಡಿ ಹಣ್ಣು-ಜವನ ಎಸೆದು ಭಕ್ತಿಭಾವ ಪ್ರದಶರ್ಿಸಿದರು. ತೇರೆಳೆಯುವ ಭಕ್ತರ ದಾಹತಣಿಸಲು ದಾನಿಗಳು ಮುಂದೆ ನಿಂತು ಅಲ್ಲಲ್ಲಿ ಮಜ್ಜಿಗೆ, ಪಾನಕ, ನೀರು ವಿತರಿಸಿದರು ಕಳೆದ ಸಲ ಮಹಾರಥೋತ್ಸವ 11 ಗಂಟೆ ವೇಳೆ ಮುಕ್ತಾಯವಾಗಿ ಭಕ್ತರು ನಿರಾಸೆಯಾಗಿದ್ದರು. ಜಿಲ್ಲಾಧಿಕಾರಿಗಳು ಸಹ ಮೇಲುಕೋಟೆ ದೇವಾಲಯದ ಇಒರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವರ್ಷ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಸೂಚನೆಯಂತೆ ಪಾರುಪತ್ತೇಗಾರರಾದ ಸ್ಥಾನಾಚಾರ್ಯ ಶ್ರೀನಿವಾಸನರಸಿಂಹನ್ ಗುರೂಜಿ ಪರಿಚಾರಕ ಪಾರ್ಥಸಾರಥಿ ಮಾರ್ಗದರ್ಶನದಲ್ಲಿ ದೇವಾಲಯದ ಶ್ರೀಪಾದದವರು, ಬಂಡೀಕಾರರು ಭಕ್ತಸ್ನೇಹಿಯಾಗಿ ಮಹಾರಥೋತ್ಸವ ನಡೆಸುವ ಮೂಲಕ ಭಕ್ತರ ಮೆಚ್ಚುಗೆಗೆ ಪಾತ್ರರಾದರು
24ಎಂಎಲ್.ಕೆ 1 ಮೇಲುಕೋಟೆ ಚೆಲುವನಾರಾಯಣಸ್ವಾಮಿಗೆ ವೈರಮುಡಿ ಬ್ರಹ್ಮೋತ್ಸವದ 7ನೇದಿನವಾದ ಭಾನುವಾರ ರಾತ್ರಿ ಲಕ್ಷಾಂತರ ಭಕ್ತರ ಸಮಕ್ಷದಲ್ಲಿ ಮಹಾರಥೋತ್ಸವ ನೆರವೇರಿತು 2 ಮಹಾರಥೋತ್ಸವಕ್ಕೂ ಮೊದಲು ಚೆಲುವನಾರಾಯಣಸ್ವಾಮಿಗೆ ಶ್ರೀದೇವಿಭೂದೇವಿ ಕಲ್ಯಾಣನಾಯಕಿ ಸಮೇತ ಉತ್ಸವ ನೆರವೇರಿತು.