ಕೆಆರ್ಪಿಪಿ ಪಕ್ಷ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಇಂದು ಬಿ.ಎಸ್.ಯಡಿಯೂರಪ್ಪ, ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜನಾರ್ದನ ರೆಡ್ಡಿ ಅವರಿಗೆ ಪಕ್ಷದ ಬಾವುಟ ನೀಡಿ ಬಿವೈ ವಿಜಯೇಂದ್ರ ಸ್ವಾಗತಿಸಿದರು. ಬಿಜೆಪಿಯಲ್ಲಿ ಕೆಆರ್ಪಿಪಿ ಪಕ್ಷವನ್ನೂ ವಿಲೀನಗೊಳಿಸಿದ್ದಾರೆ. ನಿನ್ನೆ ರಾಜ್ಯ ಬಿಜೆಪಿ ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿಗೆ ಸೇರಲು ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದರು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.