ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಳ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ.
- ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ
- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ್
- ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ (ಹಾಲಿ ಸಂಸದ ಅನಂತಕುಮಾರ ಹೆಗಡೆಗೆ ಕೈತಪ್ಪಿದ ಟಿಕೆಟ್)
- ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ್ ಶೆಟ್ಟರ್
- ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಇನ್ನೂ ಪೆಂಡಿಂಗ್