ಮೈಸೂರು : ಸಾಮಾನ್ಯವಾಗಿ ಏಪ್ರಿಲ್ – ಮೇ ತಿಂಗಳಲ್ಲಿ ಶಾಲೆ ಮಕ್ಕಳ ಬೇಸಿಗೆ ರಜೆ ಮತ್ತು ಇತರ ರಜೆಗಳ ಕಾರಣಗಳಿಂದ ಮೈಸೂರಿಗೆ ಹರಿದು ಬರುತ್ತಿದ್ದ ಪ್ರವಾಸಿಗರ ಸಂಖ್ಯೆ ಈ ವರ್ಷ ಕಡಿಮೆಯಾಗಿದೆ. ಈ ವರ್ಷ ಪ್ರವಾಸಿಗರ ಸಂಖ್ಯೆಯಲ್ಲಿ ಶೇ 50ರಷ್ಟು ಕುಸಿತವಾಗಿರುವ ಬಗ್ಗೆ ವರದಿಯಾಗಿದೆ. ಸಾಮಾನ್ಯವಾಗಿ ಮಾರ್ಚ್ನಲ್ಲಿ ಮಕ್ಕಳ ಬೋರ್ಡ್ ಪರೀಕ್ಷೆಗಳು ಮುಗಿದ ತಕ್ಷಣ ಪ್ರವಾಸಿಗರು ಮೈಸೂರು ಮತ್ತು ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಆದಾಗ್ಯೂ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮೈಸೂರಿಗೆ ಮತ್ತು ಸಮೀಪದ ಪ್ರವಾಸಿ ತಾಣಗಳಿಗೆ ಬುಕಿಂಗ್ಗಳು ಗಣನೀಯವಾಗಿ ಕುಸಿತ ಕಂಡಿದೆ ಎಂದು ಟೂರ್ ಆಪರೇಟರ್ ಗಳು ತಿಳಿಸಿದ್ದಾರೆ.