ಮೈಸೂರು : ಇಂದಿನಿಂದ ರಾಜ್ಯಾದ್ಯಂತ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ಆರಂಭವಾಗಿದ್ದು, ಎಸ್ .ಎಸ್. ಎಲ್. ಸಿ ಪರೀಕ್ಷೆಗಾಗಿ ಮೈಸೂರು ಜಿಲ್ಲೆಯಾದ್ಯಂತ ಸಕಲ ಸಿದ್ದತೆ ಮಾಡಿಕೊಂಡಿದೆ. ಮೈಸೂರು ನಗರ ಮತ್ತು ಗ್ರಾಮೀಣ ಭಾಗ ಸೇರಿದಂತೆ ಒಟ್ಟು 132 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಮೈಸೂರು ಜಿಲ್ಲೆಯಲ್ಲಿ ಒಟ್ಟು 40,333 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಪೈಕಿ 20046 ಬಾಲಕರು, 20287 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ. ಇನ್ನು ಪರೀಕ್ಷೆಯಲ್ಲಿ ಅಕ್ರಮ ತಡೆಯಲು ಜಿಲ್ಲಾಧಿಕಾರಿಗಳ ಮಾರ್ಗದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕೂಡ ಮಾಡಿಕೊಳ್ಳಲಾಗಿದೆ.