ಬೆಂಗಳೂರು : ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಮಂಗಳವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ 199 ಎಲ್ಇಡಿ ಟಿವಿಗಳನ್ನು ಜಪ್ತಿ ಮಾಡಲಾಗಿದೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲ್ಯಾಂಕೋ ಟೋಲ್ನಲ್ಲಿ ಚುನಾವಣಾ ಅಧಿಕಾರಿಗಳು 199 ಎಲ್ಇಡಿ ಟಿವಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಎಲ್ಇಡಿ ಟಿವಿಗಳು ಇಸ್ಲಾಂಪುರ ಗ್ರಾಮದ ಬಾಬುಜಾನ್ಗೆ ಸೇರಿವೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.