ಚಿಕ್ಕಮಗಳೂರು: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ 2023-24 ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೃಹತ್/ಮಧ್ಯಮ ನೀರಾವರಿ ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ನದಿಯ ಮೂಲಕ ಮಾರ್ಚ್ 29 ರಿಂದ ಏಪ್ರಿಲ್ 6 ರವರೆಗೆ ನೀರನ್ನು ಹರಿಸಲಾಗುತ್ತದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ನದಿ ಪಾತ್ರದಲ್ಲಿ ಈ ದಿನಾಂಕಗಳಂದು ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ ಇತ್ಯಾದಿ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ರೈತಬಾಂಧವರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್ಸೆಟ್ಗಳಿAದ ನೀರೆತ್ತುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆ ತರಬೇತಿ ಶಿಬಿರ
ಚಿಕ್ಕಮಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿರುವ ಈಜುಕೊಳದಲ್ಲಿ ಏ. 2 ರಿಂದ ಬೇಸಿಗೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈಜುಕೊಳ ಸಹಾಯಕರು ಶಿವಕುಮಾರ್ ಹೆಚ್.ಎಸ್. ಮೊ.ಸಂ. 9945598180 ಮತ್ತು ನವೀನ್ ಡಿ.ಎನ್. ಮೊ.ಸಂ. 9886887973 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಅಡಚಣೆ
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರಸರಣ ಮಾರ್ಗ ಮತ್ತು ಉಪಸ್ಥಾವರಗಳ ವಿಭಾಗಕ್ಕೆ 220/66/11 ಕೆ.ವಿ. ಮುಗುಳುವಳ್ಳಿ ಸ್ವೀಕರಣಾ ಕೇಂದ್ರದಿಂದ ಹೊರಹೊಮ್ಮುವ 66 ಕೆ.ವಿ. ಮಾರ್ಗದಲ್ಲಿ ಬೃಹತ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮುಗುಳುವಳ್ಳಿ 220/66/11 ಕೆ.ವಿ. ಸ್ವೀಕರಣಾ ಕೇಂದ್ರಕ್ಕೆ ವಿದ್ಯುತ್ ಅಡಚಣೆ ಉಂಟಾಗಲಿದೆ.
ಸದರಿ ಫೀಡರ್ಗಳ ವ್ಯಾಪ್ತಿಗೆ ಬರುವ ಮುಗುಳುವಳ್ಳಿ ಸ್ವೀಕರಣಾ ಕೇಂದ್ರದಿಂದ 220/66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಾದ ಆಲ್ದೂರು, ಜೇನುಗದ್ದೆ, ಹಾಗೂ ಬಾಳೆಹೊನ್ನೂರು ವಿವಿ ಕೇಂದ್ರಗಳಿಗೆ ಮಾರ್ಚ್ 28 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.