ಹನಗೋಡು: ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರದಂದು ಮತದಾನ ಜಾಗೃತಿ ಹಮ್ಮಿಕೊಳ್ಳಲಾಯಿತು. ಹನಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷ ಚೇತನ್ಯ ವ್ಯಕ್ತಿಗಳು ಭಾಗವಹಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಡಾ. ಅನಿತಾ, ಎಸ್ಡಿಎ ಚಂದ್ರಶೇಖರ್, ಡಿಇಒ ಆನಂದ್, ವಿಕಲ ಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಶ್ವೇತ ಹಾಗೂ ಗ್ರಾಮಸ್ಥರು ಭಾಗವಹಿಸಿದರು.