ಬೆಂಗಳೂರು : ₹1,823 ಕೋಟಿ ತೆರಿಗೆ ಕಟ್ಟುವಂತೆ ಕಾಂಗ್ರೆಸ್ಗೆ IT ನೋಟಿಸ್ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ತೆರಿಗೆ ಭಯೋತ್ಪಾದನೆ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.