ಮಂಡ್ಯ : ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಚುನಾವಣೆ ಬಂದ್ರೆ ಸಾಕು ಆಸ್ಪತ್ರೆಗೆ ಸೇರ್ತಾರೆ ಎಂಬ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅನುಮಾನಕ್ಕೆ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೇರೆಯವರು ಈ ಬಗ್ಗೆ ಮಾತಾಡುವ ಅವಶ್ಯಕತೆ ಇಲ್ಲ ಎಂದು ಹೆಚ್ಡಿಕೆ ಆಪರೇಷನ್ ವಿಚಾರ ಮಾತಾಡುವಾಗ ನಿಖಿಲ್ ಭಾವುಕರಾಗಿದ್ದಾರೆ.ತಂದೆಯ ವಿಚಾರದ ಬಗ್ಗೆ ಮಾತನಾಡುವಾಗ ಸಹಜ ಅಲ್ಲವೇ. ತಂದೆ-ಮಗನ ಸಂಬಂಧ ಅಂದ್ರೆ ಭಾವನೆಗಳು ಎಂದು ಮಂಡ್ಯದಲ್ಲಿ JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಂದೆ ಬಗ್ಗೆ ಮಾತನಾಡುತ್ತ ಭಾವುಕರಾದರು.
ಮಂಡ್ಯದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆಗೆ ಸೋತು ಎನ್.ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಕುಮಾರಣ್ಣ ಸ್ಪರ್ಧೆ ಮಾಡ್ತಾ ಇದ್ದಾರೆ. ರಮೇಶ್ ಬಂಡಿಸಿದ್ದೇಗೌಡ ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ. ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ ಮಾಡುವ ಅಗತ್ಯವಿಲ್ಲ. ಆಪರೇಷನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಷನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರ ಚಿಕಿತ್ಸೆ ಆಗಿದೆ. ಇದನ್ನು ಸಾಬೀತು ಮಾಡುವ ಅವಶ್ಯಕತೆ ನಮಗೆ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.